ಪರ್ಕಳ ಹಡಿಲು ಭೂಮಿ ಕೃಷಿ ನಾಟಿಗೆ ನಾಳೆ ಚಾಲನೆ – ಪೂರ್ವ ತಯಾರಿ ಬಗ್ಗೆ ಶಾಸಕ ರಘುಪತಿ ಭಟ್ ವೀಕ್ಷಣೆ

ಕೇದಾರೋತ್ಥಾನ ಟ್ರಸ್ಟ್ ಮೂಲಕ ಪರ್ಕಳ ವಾರ್ಡಿನಲ್ಲಿ ಸುಮಾರು 60 ಎಕರೆ ಹಡಿಲು ಭೂಮಿಯನ್ನು ಸಾವಯುವ ಕೃಷಿ ಮಾಡಲಾಗುತ್ತಿದ್ದು, ನಾಳೆ ದಿನಾಂಕ 25-07-2021 ರಂದು ಕೃಷಿ ನಾಟಿ ಕಾರ್ಯಕ್ಕೆ ಭಾರತೀಯ ಜನತಾ ಪಾರ್ಟಿ ಕರ್ನಾಟಕ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಅನೇಕ ಗಣ್ಯರು ಚಾಲನೆ ನೀಡಿ ನಾಟಿ ಕಾರ್ಯದಲ್ಲಿ ಪಾಲ್ಗೊಳ್ಳಲಿರುವುದರಿಂದ ಇಂದು ದಿನಾಂಕ 24-07-2021 ರಂದು ಶಾಸಕ ಶ್ರೀ ಕೆ ರಘುಪತಿ ಭಟ್ ರವರು ಪರ್ಕಳ ವಾರ್ಡಿನಲ್ಲಿ ನಡೆಯುತ್ತಿರುವ ಕೃಷಿ ಚಟುವಟಿಕೆಯನ್ನು ವೀಕ್ಷಿಸಿ ಪೂರ್ವ ತಯಾರಿಯ ಬಗ್ಗೆ ಸ್ಥಳೀಯರೊಂದಿಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ಕೇದಾರೋತ್ಥಾನ ಟ್ರಸ್ಟ್ ನ ಕೋಶಾಧಿಕಾರಿಗಳಾದ ರಾಘವೇಂದ್ರ ಕಿಣಿ, ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಶಿವಮೊಗ್ಗ ಮತ್ತು ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಬ್ರಹ್ಮಾವರದ ಹಿರಿಯ ಕ್ಷೇತ್ರ ಅಧಿಕಾರಿಗಳಾದ ಶಂಕರ್, ನಗರ ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿಗಳಾದ ಸಂದೇಶ್ ಪ್ರಭು, ಸ್ಥಳೀಯರಾದ ರಂಜಿತ್, ಅಕ್ಷಯ್ ಹಾಗೂ ಕೃಷಿಕರು ಉಪಸ್ಥಿತರಿದ್ದರು.