ಮಣಿಪಾಲ : ಬ್ಲ್ಯಾಂಕ್ ಫಂಗಸ್ ಗೆ ಎರಡು ಸಾವು!

ಉಡುಪಿ : ಬ್ಲ್ಯಾಕ್ ಫಂಗಸ್ ಸೋಂಕಿಗೆ ಉಡುಪಿ ಜಿಲ್ಲೆಯ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ 8 ಮಂದಿಗೆ ಕಪ್ಪು ಶೀಲಿಂದ್ರ ಸೋಂಕು ದೃಢಪಟ್ಟಿದ್ದು, ಸಾವನ್ನಪ್ಪಿದವರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ.
ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟವರು ಚಿತ್ರದುರ್ಗ ಹಾಗೂ ಹಾವೇರಿ ಜಿಲ್ಲೆಯವರಾಗಿದ್ದರು, 45 ವರ್ಷ ಪ್ರಾಯದ ಪುರುಷ ಹಾಗೂ 43 ವರ್ಷ ಪ್ರಾಯದ ಮಹಿಳೆ ಮೃತಪಟ್ಟವರು. ಆಸ್ಪತ್ರೆಯಲ್ಲಿ ಇನ್ನೂ ಆರು ಮಂದಿ ಬ್ಲ್ಯಾಕ್ ಫಂಗಸ್ ಸೋಂಕಿಗೆ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಆರೋಗ್ಯ ಇಲಾಖೆ ಈ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ.
ಇದುವರೆಗೆ ಉಡುಪಿ ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್ ಸೋಂಕಿನ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಉಳಿದವರು ಹೊಸ ಜಿಲ್ಲೆಯವರು ಆಗಿದ್ದಾರೆ. ಇನ್ನು ದಾವಣಗೆರೆ ಜಿಲ್ಲೆಯಲ್ಲಿಯೂ ಕಪ್ಪು ಶಿಲೀಂಧ್ರದ ಅಬ್ಬರ ಜೋರಾಗಿದೆ. ಜಿಲ್ಲೆಯಲ್ಲಿ ಇದುವರೆಗೆ 122 ಮಂದಿಗೆ ಸೋಂಕು ದೃಢಪಟ್ಟಿದೆ.