ರಾಷ್ಟ್ರೀಯ
ಭದ್ರತಾಪಡೆ ಸಿಬ್ಬಂದಿ ಕೈಯಿಂದ ಎ ಕೆ 47 ರೈಫಲ್ ಕಸಿದು ಪರಾರಿಯಾದ ಉಗ್ರರು

ಶ್ರೀನಗರ: ಜಮ್ಮು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಭಯೋತ್ಪಾದಕರು ಪೊಲೀಸ್ ಕಾನ್ ಸ್ಟೇಬಲ್ ಬಳಿ ಇದ್ದ ಎ ಕೆ 47 ರೈಫಲ್ ಕಸಿದು ಪರಾರಿಯಾಗಿದ್ದಾರೆ.
ಕುಲ್ಗಾಂ ಜಿಲ್ಲೆಯ ಕುದ್ವಾನಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಕರ್ತವ್ಯ. ನಿರತ ಪೊಲೀಸ್ ಕಾನ್ ಸ್ಟೇಬಲ್ ಮೇಲೆ ದಾಳಿ ನಡೆಸಿದ ಭಯೋತ್ಪಾದಕರು ರೈಫಲ್ ಕಸಿದು ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ.
ಶನಿವಾರ ಬಂಡಿಪೋರಾದಲ್ಲಿ ನಡೆಸಲಾದ ಕಾರ್ಯಾಚರಣೆಯಲ್ಲಿ ಮೂವರು ಉಗ್ರರು ಹತರಾಗಿದ್ದರು. ಈ ಮಧ್ಯೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಿದ್ದಾರೆ.