ರಾಜ್ಯ

ಶಾಲೆಗಳ ಪಠ್ಯಪುಸ್ತಕದಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನಿಂದಲೇ ಭಗವದ್ಗೀತೆ ಅಳವಡಿಕೆ’ – ಸಚಿವ ಬಿ.ಸಿ ನಾಗೇಶ್

ವಿಜಯಪುರ : ಶಾಲೆಗಳ ಪಠ್ಯಪುಸ್ತಕದಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನಿಂದಲೇ ಭಗವದ್ಗೀತೆ ಅಳವಡಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಲೆಗಳಲ್ಲಿ ನೈತಿಕ ಶಿಕ್ಷಣಕ್ಕೆ ಒತ್ತು ನೀಡುವ ಉದ್ದೇಶದಿಂದ ಪ್ರಸಕ್ತ ಶೈಕ್ಷಣಿಕ ಸಾಲಿನಿಂದಲೇ ಪಠ್ಯಪುಸ್ತಕದಲ್ಲಿ ಭಗವದ್ಗೀತೆ ಅಳವಡಿಸಲಾಗುವುದು. ನೈತಿಕ ಶಿಕ್ಷಣ ಈಗ ಅಗತ್ಯವಿದ್ದು, ರಾಮಾಯಣ, ಮಹಾಭಾರತ ಸೇರಿದಂತೆ ನೈತಿಕ ಗುಣ ಬೆಳೆಸುವ ಕತೆಗಳನ್ನು ಅಳವಡಿಸಲಾಗುವುದು ಎಂದಿದ್ದಾರೆ.

ಇನ್ನು ಭಗವದ್ಗೀತೆ ಧಾರ್ಮಿಕ ಆಚರಣೆಯಲ್ಲ, ಪೂಜಾ ವಿಧಾನವೂ ಅಲ್ಲ, ಅದರ ಸಾರವನ್ನು ಎಲ್ಲ ಧರ್ಮೀಯರೂ ಕೇಳುವುದರಲ್ಲಿ ಯಾವುದೇ ತಪ್ಪಿಲ್ಲ, ಜೀವನಕ್ಕೆ ಬೇಕಾದ ಮಾರ್ಗದರ್ಶನ ಅದರಲ್ಲಿ ಅಡಗಿದೆ ಎಂದು ಹೇಳಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!