ರಾಜ್ಯ

ರಾಜ್ಯ ನೂತನ ಸಿಎಂ ಬಸವರಾಜ್ ಬೊಮ್ಮಾಯಿ ಪ್ರಮಾಣ ವಚನ ಸ್ವೀಕಾರ .

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಬಸವರಾಜ ಬೊಮ್ಮಾಯಿಯವರು ಇದೀಗ ರಾಜ್ಯದ 30ನೇ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಆ ಬಳಿಕ 12 ಗಂಟೆಗೆ ಮಹತ್ವದ ಸುದ್ದಿಗೋಷ್ಠಿ ನಡೆಸಿ ಮಾತನಾಡಲಿದ್ದಾರೆ ಎನ್ನಲಾಗುತ್ತಿದೆ.

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ, ಬೆಳಿಗ್ಗೆ 11ಕ್ಕೆ ಪ್ರಮಾಣವಚನವನ್ನು ಸ್ವೀಕರಿಸಿದ್ದು, ರಾಜಭವನದ ಗಾಜಿನ ಅರಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು, ಪ್ರತಿಜ್ಞಾವಿಧಿಯನ್ನು ಬೋಧಿಸಿದ್ದಾರೆ.

ಈ ಕಾರ್ಯಕ್ರಮದಲ್ಲಿ ಬಿಎಸ್ ಯಡಿಯೂರಪ್ಪ ಸೇರಿದಂತೆ ವಿವಿಧ ಗಣ್ಯರು ಉಪಸ್ಥಿತರಿದ್ದರು. ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ, ಮಧ್ಯಾಹ್ನ 12ಕ್ಕೆ ವಿಧಾನಸೌಧದಲ್ಲಿ ಮಹತ್ವದ ಸುದ್ದಿಗೋಷ್ಠಿಯನ್ನು ನಡೆಸಿ ಮಾತನಾಡಲಿದ್ದಾರೆ. ಆ ಬಳಿಕ ರಾಜ್ಯ ಸಚಿವ ಸಂಪುಟ ರಚನೆ ಕುರಿತಂತೆ ಮಾಹಿತಿ ನೀಡಲಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ. ಅಲ್ಲದೇ ಇಂದು ಸಂಜೆ ಬಸವರಾಜ ಬೊಮ್ಮಾಯಿಯವರು, ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಲಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!