
ಬಂಟ್ವಾಳ : ಕರ್ನಾಟಕ ರಾಜ್ಯದಲ್ಲಿ ಈಗ ಡ್ರಗ್ಸ್ ದಂಧೆಯ ಬಿಸಿ ಬಿಸಿ ಸುದ್ದಿಯ ಮಧ್ಯೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ಲಕ್ಷಾಂತರ ರೂ ಮೌಲ್ಯದ ಗಾಂಜಾ ಪತ್ತೆ ಮಾಡಿದ ಬಂಟ್ವಾಳ ನಗರ ಠಾಣಾ ಎಸ್. ಐ. ಅವಿನಾಶ್ ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಬಂಟ್ವಾಳ ಪುರಸಭಾ ವ್ಯಾಪ್ತಿಯ ಪರ್ಲಿಯಾ ನಿವಾಸಿ ಅಹಮ್ಮದ್ ಸಾಬಿತ್ (30) ಬಂಧಿತ ಆರೋಪಿಯಾಗಿದ್ದಾನೆ ತಿಳಿದು ಬಂದಿದೆ. ಇನೊಬ್ಬ ಆರೋಪಿ ಪರಾರಿಯಾಗಿದ್ದಾನೆ ಎನ್ನಲಾಗಿದೆ.
ಬಂಧಿತ ಆರೋಪಿಗಳಿಂದ 39 ಕೆ.ಜಿ.948 ಗ್ರಾಂ ತೂಕದ 19,97,400 ರೂ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಅಕ್ರಮವಾಗಿ ಹಣ ಸಂಪಾದನೆ ಮಾಡುವ ಉದ್ದೇಶದಿಂದ ಅಹಮ್ಮದ್ ಸಾಬಿತ್ ಮತ್ತು ಆತನ ಚಿಕ್ಕಮ್ಮನ ಮಗ ಇಬ್ಬರು ಸೇರಿ ಗಾಂಜಾವನ್ನು ಪರ್ಲಿಯಾ ಬಾಡಿಗೆ ಕೊಠಡಿಯಲ್ಲಿ ದಾಸ್ತಾನು ಇರಿಸಿದ್ದರು ಎನ್ನಲಾಗಿದೆ.
ಇದರ ಬಗ್ಗೆ ಮಾಹಿತಿ ಪಡೆದ ಬಂಟ್ವಾಳ ನಗರ ಠಾಣಾ ಪೋಲೀಸರು ದಾಳಿ ನಡೆಸಿ ಸೊತ್ತುಗಳ ಸಹಿತ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎಂದು ತಿಳಿಯಲಾಗಿದೆ.
ಎಸ್.ಪಿ. ಲಕ್ಮೀಪ್ರಸಾದ್ ಅವರ ನಿರ್ದೇಶನದಂತೆ ಬಂಟ್ವಾಳ ಡಿ.ವೈ.ಎಸ್.ಪಿ.ವೆಲೆಂಟೈನ್ ಡಿ.ಸೋಜ ಅವರ ಮಾರ್ಗದರ್ಶನ ದಲ್ಲಿ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್ ಅವರ ನೇತ್ರತ್ವದಲ್ಲಿ ಬಂಟ್ವಾಳ ಎಸ್. ಐ.ಅವಿನಾಶ್ ಅವರ ತಂಡ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ ಎನ್ನಲಾಗಿದೆ.