
ಶಿವಮೊಗ್ಗ: ಸಾಗರದ ಕಾಸ್ಪಾಡಿ ಬಳಿ ಕೆ.ಎಸ್.ಆರ್.ಟಿ.ಸಿ ಬಸ್ ಭೀಕರ ಅಪಘಾತಕ್ಕೀಡಾಗಿದೆ. ಎದುರಿನಿಂದ ಬಂದ ಬೈಕ್ ತಪ್ಪಿಸಲು ಹೋಗಿ ಕೆ.ಎಸ್.ಆರ್.ಟಿ.ಸಿ ಬಸ್ ಕಾಸ್ಪಾಡಿ ಕೆರೆಗೆ ಉರುಳಿದ ಘಟನೆ ಸಂಭವಿಸಿದೆ. ಬಸ್ಸಿನಲ್ಲಿದ್ದ ಇಬ್ಬರು ಪ್ರಯಾಣಿಕರು ಅಸುನೀಗಿದ್ದಾರೆ ಎಂದು ತಿಳಿದುಬಂದಿದೆ .
ಬಸ್ ಸಾಗರದಿಂದ ಶಿವಮೊಗ್ಗ ಕಡೆಗೆ ಹೋಗುತ್ತಿತ್ತು. ಬಸ್ಸಿನಲ್ಲಿದ್ದ 27 ಜನರ ರಕ್ಷಣೆ ಮಾಡಲಾಗಿದೆ.