
ಮಂಗಳೂರು: ಕೇರಳದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ದಿಡೀರ್ ಹೆಚ್ಚಳಗೊಂಡಿದೆ.
ಹೀಗಾಗಿ ರಾಜ್ಯದ ದಕ್ಷಿಣ ಕನ್ನಡದ ಗಡಿ ಭಾಗಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.
ಕೇರಳದಿಂದ ರಾಜ್ಯಕ್ಕೆ ಆಗಮಿಸುವವರಿಗೆ ಆರ್ ಟಿ ಪಿ ಸಿ ಆರ್ ಪರೀಕ್ಷೆಯ ನೆಗೆಟಿವ್ ವರದಿ ಕಡ್ಡಾಯಗೊಳಿಸಿದ್ದಾರೆ .
ಒಂದು ವೇಳೆ ಈ ಸರ್ಟಿಫಿಕೇಟ್ ಇಲ್ಲದವರಿಗೆ ಸ್ಥಳದಲ್ಲಿ ಆರ್‌ಟಿ-ಪಿಸಿ ಆರ್ ಪರೀಕ್ಷೆ ನಡೆಸಲು ವ್ಯವಸ್ಥೆ ಮಾಡಲಾಗಿದೆ.
ಮೊದಲ ಡೋಸ್ ಲಸಿಕೆ ಪಡೆದವರಿಗೆ ಬರಲು ಅವಕಾಶವಿದ್ದು, ಈ ವಿಚಾರದಲ್ಲೂ ಕಠಿಣ ಕ್ರಮ ಕೈಗೊಳ್ಳಲು ಚಿಂತನೆ ನಡೆಸಲಾಗುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ ತಿಳಿಸಿದ್ದಾರೆ. ಸಿಎಂ ಬೊಮ್ಮಾಯಿ ಗಡಿಭಾಗಗಳಲ್ಲಿ ಎಚ್ಚರವಹಿಸಲು ತಿಳಿಸಿದ್ದಾರೆ.
ಕೇರಳದಲ್ಲಿ ನಿನ್ನೆ ಒಂದೇ ದಿನ 20 ಸಾವಿರಕ್ಕೂ ಅಧಿಕ ಕೊರೋನಾ ಪ್ರಕರಣಗಳು ದಾಖಲಾಗಿವೆ. ಹೀಗಾಗಿ ರಾಜ್ಯದಲ್ಲೂ ಮೂರನೇ ಅಲೆ ಆತಂಕ ಎದುರಾಗಿದೆ.