
ಉಡುಪಿ ಜಿಲ್ಲಾ ಪಂಚಾಯತ್ ಡಾll. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಇಂದು ದಿನಾಂಕ 30-07-2021 ರಂದು ನಡೆದ ಪರಿಶಿಷ್ಟ ಪಂಗಡದ ಕೊರಗ ಜನಾಂಗದವರ ಕುಂದುಕೊರತೆ ಸಭೆಯಲ್ಲಿ ಶಾಸಕರಾದ ಶ್ರೀ ಕೆ ರಘುಪತಿ ಭಟ್ ರವರು ಭಾಗವಹಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಜಿ ಜಗದೀಶ್, ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ನವೀನ್ ಭಟ್ ವೈ, ಜಿಲ್ಲಾ ಆರೋಗ್ಯಾಧಿಕಾರಿಗಳಾದ ನಾಗಭೂಷಣ್ ಉಡುಪ, ಅಪರ ಜಿಲ್ಲಾಧಿಕಾರಿಗಳಾದ ಸದಾಶಿವ ಪ್ರಭು, ಸಾರ್ವಜನಿಕ ಶಿಕ್ಷಣ ಇಲಾಖೆ ಉಡುಪಿ ಉಪ ನಿರ್ದೇಶಕರಾದ ಎಚ್.ಎಸ್ ನಾಗೂರ್, ಐ.ಟಿ.ಡಿ.ಪಿ ಉಡುಪಿ ಯೋಜನಾ ಸಮನ್ವಯಾಧಿಕಾರಿಗಳಾದ ದೂದ್ ಪೀರ್, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಬಾಬು ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.