ಪತ್ರಕರ್ತರಿಂದ ನಾಟಿ ಕಾರ್ಯ – ಹಾರಾಡಿ ಹಡಿಲು ಭೂಮಿ ಕೃಷಿ ಕಡೇ ನಟ್ಟಿ ಸಮಾರೋಪ

“ಹಡಿಲು ಭೂಮಿ ಕೃಷಿ ಅಂದೋಲನ”ದಡಿ ಕೇದಾರೋತ್ಥಾನ ಟ್ರಸ್ಟ್ ಮೂಲಕ ಹಾರಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 10 ಎಕರೆ ಹಡಿಲು ಭೂಮಿಯನ್ನು ಸಾವಯವ ಕೃಷಿ ಮಾಡಲಾಗುತ್ತಿದ್ದು, ಇಂದು ದಿನಾಂಕ 01-08-2021 ರಂದು ಹಾರಾಡಿ ಗ್ರಾಮದ ಹೊನ್ನಾಳ ಕಂಬಳಗದ್ದೆ ಮನೆ ಬಳಿಯ ಹಡಿಲು ಭೂಮಿ ಕೃಷಿ ನಾಟಿ ಕಡೇ ನಟ್ಟಿ (ಸಮಾರೋಪ) ದಲ್ಲಿ ಪತ್ರಕರ್ತರು ಹಾಗೂ ಸಾಮಾಜಿಕ ಕ್ಷೇತ್ರದ ಗಣ್ಯರು ಪಾಲ್ಗೊಂಡರು.
ಶ್ರೀ ಸಂತೋಷ್ ಶೆಟ್ಟಿ ಅಧ್ಯಕ್ಷರು ಬಂಟರ ಸಂಘ, ಪುಣೆ, ಶ್ರೀ ಪ್ರಕಾಶ್ ಚಂದ್ರ ಶೆಟ್ಟಿ ಅಧ್ಯಕ್ಷರು, ವ್ಯವಸ್ಥಾಪಕ ಟ್ರಸ್ಟಿ ಜಿ.ಎಂ ಎಜುಕೇಶನ್ ಟ್ರಸ್ಟ್, ಬ್ರಹ್ಮಾವರ, ಶ್ರೀ ರಾಜೇಶ್ ಶೆಟ್ಟಿ ಅಲೆವೂರು ಅಧ್ಯಕ್ಷರು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಶ್ರೀ ಅಜಿತ್ ಆರಾಡಿ ಕೃಷಿಕರು ಮತ್ತು ವರದಿಗಾರರು ವಿಜಯ ಕರ್ನಾಟಕ ಉಡುಪಿ ಜಿಲ್ಲೆ ಇವರೊಂದಿಗೆ ಶಾಸಕ ಶ್ರೀ ಕೆ. ರಘುಪತಿ ಭಟ್ ಅವರು ಭೂ ಮಾತೆಗೆ ಹಾಲನ್ನು ಅರ್ಪಿಸಿ ನೇಜಿ ನೀಡುವ ಮೂಲಕ ಯಂತ್ರ ನಾಟಿ ಕಾರ್ಯಕ್ಕೆ ಚಾಲನೆ ನೀಡಿ ಸ್ಥಳೀಯರೊಂದಿಗೆ ಸೇರಿ ನೇಜಿ ನೆಟ್ಟರು.
ಹಡಿಲು ಭೂಮಿ ಕೃಷಿ ಕಾರ್ಯದಲ್ಲಿ ತೊಡಗಿಸಿಕೊಂಡು ಸಹಕರಿಸಿದ ಸಂಘ – ಸಂಸ್ಥೆಯವರಿಗೆ, ಭೂ ಮಾಲಕರಿಗೆ, ಸ್ಥಳೀಯರಿಗೆ ಶಾಸಕರಾದ ಶ್ರೀ ಕೆ. ರಘುಪತಿ ಭಟ್ ಅವರು ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಹಾರಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಭಾಕರ್ ಶೆಟ್ಟಿ, ಉಪಾಧ್ಯಕ್ಷರಾದ ಜಯಂತಿ ಪೂಜಾರಿ, ಸ್ಥಳೀಯರಾದ ಎ. ಬಾಲಕೃಷ್ಣ ಶೆಟ್ಟಿ, ಅಬು ಸಾಹೇಬ್, ಕೇದಾರೋತ್ಥಾನ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿಗಳಾದ ಮುರಳಿ ಕಡೆಕಾರ್, ಕೋಶಾಧಿಕಾರಿಗಳಾದ ರಾಘವೇಂದ್ರ ಕಿಣಿ, ಸದಸ್ಯರಾದ ಬಿರ್ತಿ ರಾಜೇಶ್ ಶೆಟ್ಟಿ, ಪ್ರತಾಪ್ ಹೆಗ್ಡೆ ಮಾರಾಳಿ, ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಶಿವಮೊಗ್ಗ ಮತ್ತು ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಬ್ರಹ್ಮಾವರದ ಹಿರಿಯ ಕ್ಷೇತ್ರ ಅಧಿಕಾರಿಗಳಾದ
ಡಾll. ಶಂಕರ್ ಹಾಗೂ ಹಾರಾಡಿ ಗ್ರಾಮ ಪಂಚಾಯತ್ ಸದಸ್ಯರು, ಭೂ ಮಾಲಕರು, ಸ್ಥಳೀಯ ಕೃಷಿಕರು, ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.