
ಮುಂಬೈ: ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ವಿರುದ್ಧ ದಾಖಲಾಗಿರುವ ಅಶ್ಲೀಲ ಚಿತ್ರ ನಿರ್ಮಾಣ ಆರೋಪದಲ್ಲಿ ತನ್ನ ಹೆಸರು ಕೈ ಬಿಡಲು ಮುಂಬೈ ಪೊಲೀಸರು 15 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇರಿಸಿದ್ದರು ನಟಿ ಗೆಹನಾ ವಶಿಷ್ಟ್ ಆರೋಪಿಸಿದ್ದಾರೆ.
ಸಂದರ್ಶನವೊಂದರಲ್ಲಿ ಅವರು ಈ ಗಂಭೀರ ಆರೋಪ ಮಾಡಿದ್ದಾರೆ. ಗೆಹನಾ ವಶಿಷ್ಟ್ ವಿರುದ್ದ ಕೂಡ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದೇ ವೇಳೆ ಗೆಹನಾ ಆರೋಪಗಳನ್ನು ಮುಂಬೈ ಪೊಲೀಸರು ತಳ್ಳಿಹಾಕಿದ್ದಾರೆ.