ಕರಾವಳಿ
ಶಿವಕುಮಾರ್ ಅಂಬಲಪಾಡಿ ಇವರಿಗೆ ಮಹಾರಾಷ್ಟ್ರ ಎಪೆಕ್ಸ್ ಕಾರ್ಪೋರೇಷನ್ ಲಿಮಿಟೆಡ್ ಸಿಬ್ಬಂದಿ ವರ್ಗದಿಂದ ಸನ್ಮಾನ

ಕೇಂದ್ರ ಸರಕಾರದ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಸುಪರ್ದಿಯಲ್ಲಿರುವ ಕೇಂದ್ರೀಯ ಕರಾವಳಿ ಕೃಷಿ ಸಂಶೋಧನಾ ಸಂಸ್ಥೆ ಗೋವಾ ಇದರ ಆಡಳಿತ ಮಂಡಳಿಯ ಸದಸ್ಯರಾಗಿ ನಾಮ ನಿರ್ದೇಶನಗೊಂಡಿರುವ, ಮಹಾರಾಷ್ಟ್ರ ಎಪೆಕ್ಸ್ ಕಾರ್ಪೋರೇಷನ್ ಲಿಮಿಟೆಡ್ ಮಣಿಪಾಲ ಇದರ ಅಧಿಕಾರಿ ಶಿವಕುಮಾರ್ ಅಂಬಲಪಾಡಿ ಇವರನ್ನು ಧನಲಕ್ಷ್ಮೀ ಪೂಜೆಯ ಸುಸಂದರ್ಭದಲ್ಲಿ ಸಂಸ್ಥೆಯ ಸಿಬ್ಬಂದಿ ವರ್ಗದ ಪರವಾಗಿ ಸಂಸ್ಥೆಯ ಸಹಾಯಕ ಮಹಾ ಪ್ರಬಂದಕ ವಿವೇಕಾನಂದ ಬಿ. ಇವರು ಸಂಸ್ಥೆಯ ಪ್ರಭಂದಕ ಶಶೀಂದ್ರ ಭಟ್ ಹಾಗೂ ಮಣಿಪಾಲ ಸಮೂಹ ಸಂಸ್ಥೆಯ ಹಿರಿಯ ಅಧಿಕಾರಿ ಕೆ.ಎಸ್. ಕಾರಂತ್ ರವರ ಉಪಸ್ಥಿತಿಯಲ್ಲಿ ಶಾಲು ಹೊದೆಸಿ ಸನ್ಮಾನಿಸಿದರು.
ಮಣಿಪಾಲ ಶ್ರೀ ದುರ್ಗಾಂಬಾ ದೇವಸ್ಥಾನದ ಪುರೋಹಿತ ಶಿವಾನಂದ ಭಟ್ ಪ್ರಸಾದ ನೀಡಿ ಶುಭಾಂಶನೆಗೈದರು.
ಸಂಸ್ಥೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. ಸಂಸ್ಥೆಯ ಹಿರಿಯ ಅಧಿಕಾರಿ ಕೆ.ರಮೇಶ್ ಶೇರಿಗಾರ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.