ಹಡಿಲು ಭೂಮಿ ಕೃಷಿ ಆಂದೋಲನ – ಮುಂದಿನ ಕಾರ್ಯಚಟುವಟಿಕೆಯ ಬಗ್ಗೆ ಕೇದಾರೋತ್ಥಾನ ಟ್ರಸ್ಟ್ ಸದಸ್ಯರೊಂದಿಗೆ – ಶಾಸಕ ರಘುಪತಿ ಭಟ್ ಸಭೆ

ಹಡಿಲು ಭೂಮಿ ಕೃಷಿ ಅಂದೋಲನ”ದಡಿ ಕೇದಾರೋತ್ಥಾನ ಟ್ರಸ್ಟ್ ಮೂಲಕ ಉಡುಪಿ ವಿಧಾನಸಭಾ ಕ್ಷೇತ್ರದ ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ ಈಗಾಗಲೇ ನಾಟಿ ಕಾರ್ಯ ಮುಕ್ತಾಯಗೊಂಡಿದ್ದು, ನಾಟಿ ಮಾಡಿದ ಗದ್ದೆಗಳಲ್ಲಿ ಪೈರಿನ ನಡುವೆ ಕಳೆಗಳು ಬೆಳೆಯುತ್ತಿದ್ದು ಇದರ ನಿರ್ವಹಣೆಯ ಬಗ್ಗೆ ಹಾಗೂ ನಾಟಿ ಮಾಡಿದ ಗದ್ದೆಗಳಲ್ಲಿ ನೀರಿನ ನಿರ್ವಹಣೆ ಜೊತೆಗೆ ಮುಂದಿನ ಕಾರ್ಯಚಟುವಟಿಕೆಯ ಬಗ್ಗೆ ಶಾಸಕ ಶ್ರೀ ಕೆ. ರಘುಪತಿ ಭಟ್ ರವರು ಇಂದು ದಿನಾಂಕ 02-08-2021 ರಂದು ಕುಂಜಿಬೆಟ್ಟು ಶಾರದಾ ಕಲ್ಯಾಣ ಮಂಟಪದಲ್ಲಿ ಕೇದಾರೋತ್ಥಾನ ಟ್ರಸ್ಟ್ ನ ಸದಸ್ಯರು ಹಾಗೂ ಕೃಷಿ ಚಟುವಟಿಕೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡ ಕಾರ್ಯಕರ್ತರೊಂದಿಗೆ ಸಭೆ ನಡೆಸಿ ಚರ್ಚಿಸಿದರು.
ಈ ಸಂದರ್ಭದಲ್ಲಿ ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಕೇದಾರೋತ್ಥಾನ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿಗಳಾದ ಮುರಳಿ ಕಡೆಕಾರ್, ಕೋಶಾಧಿಕಾರಿಗಳಾದ ರಾಘವೇಂದ್ರ ಕಿಣಿ, ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಶಿವಮೊಗ್ಗ ಮತ್ತು ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಬ್ರಹ್ಮಾವರದ ಹಿರಿಯ ಕ್ಷೇತ್ರ ಅಧಿಕಾರಿಗಳಾದ ಡಾll. ಶಂಕರ್ ಹಾಗೂ ಕೇದಾರೋತ್ಥಾನ ಟ್ರಸ್ಟ್ ನ ಸರ್ವ ಸದಸ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.