
ಬೆಂಗಳೂರು: ರಾಜ್ಯದಲ್ಲಿ ನೂತನ ಸಚಿವ ಸಂಪುಟ ರಚನೆಯ ಕಸರತ್ತು ಕೊನೆಗೂ ಅಂತಿಮ ಹಂತ ತಲುಪಿದೆ. ಸಚಿವ ಸಂಪುಟ ರಚನೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ.
ನಾಳೆ ಸಂಜೆ 5ಗಂಟೆಗೆ ರಾಜಭವನದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.
ಸಿಎಂ ಬಸವರಾಜ್ ಬೊಮ್ಮಾಯಿ ಸಚಿವರ ಪಟ್ಟಿ ಫೈನಲ್ ಮಾಡಲು ದೆಹಲಿಗೆ ತೆರಳಿದ್ದು, ಹೈಕಮಾಂಡ್ ನಿಂದ ಹೊಸ ಸಚಿವರ ಪಟ್ಟಿ ರವಾನೆಯಾಗಿದೆ. ನಾಳೆ ಒಟ್ಟು 24 ಸಚಿವರು ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.
ಹಿರಿಯ ಸಚಿವರು ಸೇರಿದಂತೆ ವಲಸಿಗರನ್ನು ಇಟ್ಟುಕೊಂಡು ಈ ಸಾರಿ ಸಚಿವ ಸಂಪುಟ ತಯಾರಿಗಿದ್ದು, 3 ಉಪಮುಖ್ಯಮಂತ್ರಿ ಸ್ಥಾನಕ್ಕೆ ಹೈಕಮಾಂಡ್ ಒಪ್ಪಿಗೆ ನೀಡಿದೆ ಎಂದು ಹೇಳಲಾಗಿದೆ.