ಕರಾವಳಿ
ಮಂಗಳೂರು ವಿಶ್ವವಿದ್ಯಾನಿಲಯ ಎಲ್ಲಾ ಪರೀಕ್ಷೆ ಮುಂದೂಡಲಾಗಿದೆ

ಮಂಗಳೂರು: ಕೇರಳ, ಕಾಸರಗೋಡಿನಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಸ್ತುತ ನಡೆಯುತ್ತಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ಪರೀಕ್ಷೆ ಸೇರಿದಂತೆ ಎಲ್ಲಾ ಪರೀಕ್ಷೆಗಳನ್ನು ಮುಂದಿನ ಆದೇಶದವರೆಗೆ ರದ್ದುಪಡಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.
ನಿನ್ನೆ ಆರಂಭವಾಗಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ಪರೀಕ್ಷೆಗಳು ಆ.17ರಂದು ಮುಗಿಯಬೇಕಿತ್ತು. ಆದರೆ ಇದೀಗ ಕೇರಳದಲ್ಲಿ ಸೋಂಕು ಹೆಚ್ಚಿದ ಬೆನ್ನಲ್ಲೇ ಗಡಿಗಳನ್ನು ಬಂದ್ ಮಾಡಲಾಗಿದೆ. ಕಾಸರಗೋಡಿನಲ್ಲೂ ಸೋಂಕಿನ ಪ್ರಮಾಣ ಏರಿಕೆಯಾದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ರದ್ದುಪಡಿಸಿ, ಭೌತಿಕ ತರಗತಿಗಳನ್ನು ಮುಂದೂಡಿಕೆ ಮಾಡಲಾಗಿದೆ.
ಕೇರಳದಿಂದ ರಾಜ್ಯಕ್ಕೆ ಬರುವವರಿಗೆ 72 ಗಂಟೆಗಳ ಅವಧಿಯ ಆರ್ ಟಿ ಪಿ ಸಿ ಆರ್ ವರದಿ ಕಡ್ಡಾಯಗೊಳಿಸಲಾಗಿದೆ.