ಕೋವಿಡ್ ಪ್ರಕರಣ ಹೆಚ್ಚಳದ ಹಿನ್ನಲೆಯಲ್ಲಿ ಉಡುಪಿ ಜಿಲ್ಲೆಯ ಗಡಿ ಭಾಗದಲ್ಲಿ 10 ಚೆಕ್ ಪೋಸ್ಟ್..!

ಜಿಲ್ಲೆಯಾದ್ಯಂತ ಕೋವಿಡ್ ಪ್ರಕರಣಗಳು ದಿನೇದಿನೇ ಹೆಚ್ಚುತ್ತಿರುವ ಈ ಹಿನ್ನೆಲೆಯಲ್ಲಿ ಜಿಲ್ಲೆಯ ಗಡಿಭಾಗದಲ್ಲಿ ಇದೀಗ ಹತ್ತು ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಲಾಗಿದೆ ಎಂದು ಎಸ್.ಪಿ ವಿಷ್ಣುವರ್ಧನ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಹೊರಜಿಲ್ಲೆ ಮತ್ತು ಹೊರ ರಾಜ್ಯಗಳಿಂದ ಬರುವವರನ್ನು ಸ್ಕ್ರೀನಿಂಗ್ ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಹತ್ತು ಚೆಕ್ ಪೋಸ್ಟ್ ಗಳಲ್ಲಿ ಕೂಡ ಪೊಲೀಸ್ ಇಲಾಖೆ ,ಕಂದಾಯ ಇಲಾಖೆ ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಇರುತ್ತಾರೆ. ಅವರು ಹೊರರಾಜ್ಯಗಳಿಂದ ಬರುವವರನ್ನು ಸ್ಕ್ರೀನಿಂಗ್ ಮಾಡಿ ಪರಿಶೀಲಿಸುತ್ತಾರೆ.
ವ್ಯಾಕ್ಸಿನ್ ಪಡೆದಿದ್ದಾರೆಯೇ ಅಥವಾ ಕೋವಿಡ್ ಟೆಸ್ಟ್ ರಿಪೋರ್ಟ್ ಇದೆಯೇ ಎಂಬುದನ್ನು ಕೂಡ ಪರಿಶೀಲಿಸಲಾಗುತ್ತಿದೆ.ಇನ್ನು ಜಿಲ್ಲೆಯಾದ್ಯಂತ ಫ್ಲೈಯಿಂಗ್ ಸ್ಕ್ವಾಡ್ ಇಡೀ ದಿನ ಕಾರ್ಯನಿರ್ವಹಿಸುತ್ತಿದೆ. ಮಾಸ್ಕ್ ಹಾಕದವರ ವಿರುದ್ಧ ದಂಡ ಹಾಕಲಾಗುತ್ತಿದೆ ಎಂದ ಎಸ್ಪಿ ,ಈ ತನಕ ೩೧೦೦೦ ಮಾಸ್ಕ್ ಹಾಕದ ಪ್ರಕರಣಗಳಿಗೆ ದಂಡವನ್ನು ಹಾಕಿದ್ದೇವೆ ಎಂದರು.ಕಾರ್ಯಕ್ರಮಗಳು, ಸಮಾರಂಭಗಳ ಮೇಲೂ ಕೂಡ ನಿಗಾ ಇರಿಸಲಾಗಿದೆ ಎಂದು ಹೇಳಿದ್ದಾರೆ .