
“ಹಡಿಲು ಭೂಮಿ ಕೃಷಿ ಆಂದೋಲನ”ದಡಿ ಕೇದಾರೋತ್ಥಾನ ಟ್ರಸ್ಟ್ ಮೂಲಕ ನಿಟ್ಟೂರು ವಾರ್ಡಿನಲ್ಲಿ ನಾಟಿ ಮಾಡಿದ ಗದ್ದೆಯಲ್ಲಿ ಕಳೆಗಳು ಬೆಳೆಯುತ್ತಿದ್ದು ನೀತಾ ಪ್ರಭು ಅಭಿಮಾನಿ ಬಳಗದವರಿಂದ ಕಳೆ ತೆಗೆಯುವ ಕಾರ್ಯ ನಡೆಯುತ್ತಿದ್ದು, ಇಂದು ದಿನಾಂಕ 15-08-2021 ರಂದು ಶಾಸಕ ಶ್ರೀ ಕೆ. ರಘುಪತಿ ಭಟ್ ರವರು ಸ್ಥಳಕ್ಕೆ ಭೇಟಿ ನೀಡಿ ವೀಕ್ಷಿಸಿದರು.
ಸೇವಾ ಮನೋಭಾವದಿಂದ ಈ ಕಾರ್ಯದಲ್ಲಿ ಪಾಲ್ಗೊಂಡಿರುವ ಎಲ್ಲರಿಗೂ ಶಾಸಕ ಶ್ರೀ ಕೆ. ರಘುಪತಿ ಭಟ್ ಅವರು ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ
ಈ ಸಂದರ್ಭದಲ್ಲಿ ಸ್ಥಳೀಯ ನಗರಸಭಾ ಸದಸ್ಯರಾದ ಸಂತೋಷ್ ಜತ್ತನ್, ಸ್ಥಳೀಯರಾದ ರಂಜನ್, ಕೇದಾರೋತ್ಥಾನ ಟ್ರಸ್ಟ್ ನ ಕೋಶಾಧಿಕಾರಿಗಳಾದ ರಾಘವೇಂದ್ರ ಕಿಣಿ ಹಾಗೂ ನೀತಾ ಪ್ರಭು ಅಭಿಮಾನಿ ಬಳಗದ ಸದಸ್ಯರು, ಸ್ಥಳೀಯ ಕೃಷಿಕರು ಉಪಸ್ಥಿತರಿದ್ದರು.