ಮೈಸೂರು ವಿವಿ ಪ್ರಾಧ್ಯಾಪಕನ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣ ದಾಖಲು.!

ಮೈಸೂರು: ಮೈಸೂರು ವಿವಿ ಪ್ರಾಧ್ಯಾಪಕರೊಬ್ಬರು ತನ್ನ ಮೇಲೆ ಅತ್ಯಾಚಾರ ನಡೆಸಿದ್ದಾರೆಂದು ಸಂಶೋಧನಾ ವಿದ್ಯಾರ್ಥಿನಿ ಪೊಲೀಸರಿಗೆ ದೂರು ನೀಡಿದ್ದಾಳೆ.
ಮೈಸೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಪ್ರಾಧ್ಯಾಪಕ ರಾಮಚಂದ್ರ ಎಂಬಾತನೇ ಆರೋಪಿ. ಈತ ತನ್ನಿಂದ ಮಾರ್ಗದರ್ಶನ ಪಡೆಯುತ್ತಿದ್ದ ಪಿಎಚ್ಡಿ ವಿದ್ಯಾರ್ಥಿನಿಯನ್ನೇ ಮನೆಗೆ ಕರೆಸಿಕೊಂಡಿದ್ದಾನೆ. ಮನೆಯಲ್ಲಿ ಆಕೆಯ ಮೇಲೆ ಅತ್ಯಾಚಾರ ಯತ್ನವಾಗಿದ್ದು, ವಿದ್ಯಾರ್ಥಿನಿ ತಪ್ಪಿಸಿಕೊಳ್ಳುವ ಸಲುವಾಗಿ ಕೂಗಾಟ-ಚೀರಾಟ ನಡೆಸಿದ್ದಳು
ಅದೇ ಸಂದರ್ಭದಲ್ಲಿ ಪ್ರಾಧ್ಯಾಪಕರ ಪತ್ನಿ ಲೋಲಾಕ್ಷಿ ಮನೆಗೆ ಬಂದಿದ್ದು, ಪತ್ನಿ ಕೈಗೆ ರಾಮಚಂದ್ರ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಹಾಕಿಕೊಂಡಿದ್ದಾನೆ.
ಈ ಬಗ್ಗೆ ಸಂತ್ರಸ್ತೆ ಜಯಲಕ್ಷ್ಮೀಪುರಂ ಠಾಣೆಗೆ ದೂರು ನೀಡಿದ್ದಾಳೆ. ಸಂತ್ರಸ್ತೆ ಹಾಗೂ ಪತಿಯನ್ನು ಲೋಲಾಕ್ಷಿ ಠಾಣೆಗೆ ಕರೆದುಕೊಂಡು ಬಂದಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಯ ಪತ್ನಿ ಲೋಲಾಕ್ಷಿ ಕೂಡ ಮೈಸೂರು ವಿವಿಯಲ್ಲಿ ಪ್ರಾಧ್ಯಾಪಕಿ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ವಿದ್ಯಾರ್ಥಿನಿಯ ಮೇಲೆ ನಡೆಸಲಾದ ದೌರ್ಜನ್ಯಕ್ಕೆ ಪ್ರೊಫೆಸರ್ ಮೇಲೆ ಆಕ್ರೋಶ ವ್ಯಕ್ತವಾಗಿದೆ.
ವಿದ್ಯಾರ್ಥಿನಿಯ ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ