
ಸರ್ಕಾರಿ ಭರವಸೆಗಳ ಸಮಿತಿ ಸಭೆ ಇಂದು ದಿನಾಂಕ 05-08-2021ರಂದು ಬೆಂಗಳೂರಿನ ಶಾಸಕರ ಭವನದ ಸಮ್ಮೇಳನ ಸಭಾಂಗಣದಲ್ಲಿ ನಡೆಯಿತು.
ಸಮಿತಿ ಅಧ್ಯಕ್ಷರಾದ ಶ್ರೀ ಕೆ. ರಘುಪತಿ ಭಟ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದ ಬಾಕಿ ಇರುವ ಭರವಸೆಗಳ ಬಗ್ಗೆ ಸುದೀರ್ಘವಾದ ಚರ್ಚೆ ನಡೆಯಿತು.
ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಡಾ. ಅಜಯ್ ನಾಗಭೂಷಣ್, ಟಿ. ರೇಜು, ವ್ಯವಸ್ಥಾಪಕ ನಿರ್ದೇಶಕರು, ಕೆ.ಯು.ಐ. ಡಿ.ಎಫ್.ಸಿ., ಬಿ. ಬಿ. ಕಾವೇರಿ, ನಿರ್ದೇಶಕರು, ಪೌರಾಡಳಿತ ನಿರ್ದೇಶನಾಲಯ, ಮತ್ತು ಇತರ ಅಧಿಕಾರಿಗಳು ಉಪಸ್ಥಿತರಿದ್ದರು.