
ಭಾರತೀಯ ಜನತಾ ಪಾರ್ಟಿ, ಉಡುಪಿ ಜಿಲ್ಲೆ ಇದರ ವತಿಯಿಂದ ರಾಜ್ಯದ ಸಚಿವ ಸಂಪುಟದಲ್ಲಿ ನೂತನ ಸಚಿವರಾಗಿ ಆಯ್ಕೆಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ವಿ. ಸುನಿಲ್ ಕುಮಾರ್ ಹಾಗೂ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಇಂದು ದಿನಾಂಕ 06-08-2021 ರಂದು ಅಮೃತ್ ಗಾರ್ಡನ್ ನಲ್ಲಿ ಅಭಿನಂದನಾ ಸಮಾರಂಭ ನಡೆಯಿತು .
ಈ ಸಂದರ್ಭದಲ್ಲಿ ಶ್ರೀ ಕೆ. ರಘುಪತಿ ಭಟ್ ಹಾಗೂ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ, ರಾಜ್ಯ ಎಸ್.ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ್ ಬಾಬು, ರಾಜ್ಯ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಜಿ. ಸುವರ್ಣ, ಕಾರ್ಯಕಾರಣಿ ಸದಸ್ಯರಾದ ಗುರ್ಮೆ ಸುರೇಶ್ ಶೆಟ್ಟಿ, ಬಿ.ಎನ್ ಶಂಕರ್ ಪೂಜಾರಿ, ಗೀತಾಂಜಲಿ ಸುವರ್ಣ ಹಾಗೂ ವಿವಿಧ ಮೋರ್ಚಾದ ಪದಾಧಿಕಾರಿಗಳು, ವಿವಿಧ ಮಂಡಲದ ಪದಾಧಿಕಾರಿಗಳು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.