
ಮಂಗಳೂರು : ಮುಡಿಪುವಿನಲ್ಲಿ ಚಿನ್ನದ ಅಂಗಡಿಯ ಗೋಡೆ ಕೊರೆದು ಒಳಗೆ ನುಗ್ಗಿದ ಕಳ್ಳರು ಲಕ್ಷಾಂತರ ಬೆಲೆ ಬಾಳುವ ಚಿನ್ನಾಭರಣಗಳನ್ನು ದರೋಡೆ ನಡೆಸಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕುರ್ನಾಡು ಬಳಿ ನಡೆದಿದೆ.
ಇಲ್ಲಿರುವ ಗೋಲ್ಡ್ ಕಿಂಗ್ ಜ್ಯುವೆಲ್ಲರಿಯಲ್ಲಿ ಕಳವು ನಡೆದಿದೆ. ಕುರ್ನಾಡು ನಿವಾಸಿ ಇಬ್ರಾಹಿಂ ಮಾಲೀಕತ್ವದ ಅಂಗಡಿಯಿದಾಗಿದೆ. ಜ್ಯುವೆಲ್ಲರಿ ಅಂಗಡಿಯ ಎಡಭಾಗದ ಗೋಡೆಯನ್ನು ಕೊರೆದು ಈ ಕೃತ್ಯ ನಡೆಸಲಾಗಿದೆ.
ಈ ಘಟನಾ ಸ್ಥಳಕ್ಕೆ ಕೊಣಾಜೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸ್ಥಳಕ್ಕೆ ಬೆರಳಚ್ಚು ತಜ್ಞರು ಹಾಗೂ ಶ್ವಾನದಳವನ್ನು ಕರೆಸಿ ತನಿಖೆ ನಡೆಸಲಾಗಿದೆ.