
ಬೆಂಗಳೂರು: ಸಂಪುಟ ಸೇರಿರುವ ೨೯ ಸಚಿವರಿಗೆ ಶುಕ್ರವಾರ(ಅ.೬) ಖಾತೆ ಹಂಚಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ .
ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅಧಿಕಾರ ಸ್ವೀಕರಿಸಿದ ಒಂದು ವಾರದ ನಂತರ, ತಮ್ಮ ಸಂಪುಟಕ್ಕೆ ೨೯ ಸಚಿವರನ್ನು ಸೇರ್ಪಡೆ ಮಾಡಿಕೊಂಡಿದ್ದರು. ಅದರಲ್ಲಿ ೨೩ ಮಂದಿ ಹಿಂದಿನ ಬಿ.ಎಸ್. ಯಡಿಯೂರಪ್ಪ ಸಂಪುಟದಲ್ಲಿ ಸಚಿವರಾಗಿದ್ದವರಾಗಿದ್ದು, ೬ ಮಂದಿ ಹೊಸಬರಾಗಿದ್ದಾರೆ.
ಕೆಲ ಮಂತ್ರಿಗಳು ಹಿಂದಿನ ಕ್ಯಾಬಿನೆಟ್‌ನಲ್ಲಿ ತಾವು ಹೊಂದಿದ್ದ ಖಾತೆಗಳನ್ನು ಉಳಿಸಿಕೊಳ್ಳಲು ಆಶಿಸುತ್ತಿದ್ದಾರೆ. ಇನ್ನೂ ಕೆಲವರು ದೊಡ್ಡ ಖಾತೆಗಳನ್ನು ಪಡೆಯುವ ನಿರೀಕ್ಷೆಯಲ್ಲಿದ್ದಾರೆ.