ಕರಾವಳಿ
ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ: ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯ ಕುಕ್ಕುಜೆ ಗ್ರಾಮದ ಪುಣಿಲ್ ಕಟ್ಟೆ ಎಂಬಲ್ಲಿ ಸೆ.16ರಂದು ಸಂಜೆ ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಕುಕ್ಕುಜೆ ಗ್ರಾಮದ ಪುಣಿಲ್ ಕಟ್ಟೆ ನಿವಾಸಿ ಕೃಷ್ಣ ಎಂದು ತಿಳಿದು ಬಂದಿದೆ.
ಕೃಷ್ಣ ಅವರು ಮನೆಯ ಕೋಣೆಯ ಜಂತಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಇವರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ.ಈ ಬಗ್ಗೆ ಪ್ರಕರಣ ಅಜೆಕಾರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ