
ಉಡುಪಿ ಅ.2 : ಭಾರತೀಯ ಜನತಾ ಪಾರ್ಟಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ, ಉಡುಪಿ ಜಿಲ್ಲೆ ಇದರ ವತಿಯಿಂದ ಗಾಂಧಿ ಜಯಂತಿಯ ಪ್ರಯುಕ್ತ ಚರ್ಚ್, ದೇವಸ್ಥಾನ, ಮಸೀದಿ ಮತ್ತು ಬಸದಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮವನ್ನು ಪೆರಂಪಳ್ಳಿ ಚರ್ಚ್ ವಠಾರದಲ್ಲಿ ಆಯೋಜಿಸ ಲಾಗಿದ್ದು ಶಾಸಕರಾದ ಶ್ರೀ ಕೆ ರಘುಪತಿ ಭಟ್ ರವರು ಭಾಗವಹಿಸಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಘವೇಂದ್ರ ಕಿಣಿ, ಜಿಲ್ಲಾ ಪಂಚಾಯತ್ ಸದಸ್ಯೆ ಗೀತಾಂಜಲಿ ಸುವರ್ಣ, ರಾಜ್ಯ ಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಜಾಯಿನಸ್ ಡಿಸೋಜ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರಾದ ದಾವೂದ್ ಅಬುಬಕ್ಕರ್, ಅಲ್ಪಸಂಖ್ಯಾತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅಲ್ವಿನ್ ಡಿಸೋಜ, ಶೇಖ್ ಅಸಿಫ್, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾದ ವೀಣಾ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಾಲಕೃಷ್ಣ ಶೆಟ್ಟಿ, ಮತ್ತು ಚರ್ಚಿನ ಫಾದರ್ ಅನೀಲ್ ಡಿಸೋಜ ಹಾಗೂ ಪ್ರಮುಖರು, ಸ್ಥಳೀಯರು ಉಪಸ್ಥಿತರಿದ್ದರು.