
ಕೋವಿಡ್ ಸೋಂಕು ದೃಢಪಟ್ಟು ರೋಗ ಲಕ್ಷಣಗಳಿಲ್ಲದೆ ಮನೆಯಲ್ಲಿ ಐಸೋಲೇಷನ್ ಆಗಲು ಸಮಸ್ಯೆ ಇರುವವರಿಗೆ ಮಣಿಪಾಲದ ಎಂ.ಐ.ಟಿ. ಹಾಸ್ಟೆಲ್ ನಲ್ಲಿ ಆರಂಭಿಸಲಾದ ಕೋವಿಡ್ ಕೇರ್ ಸೆಂಟರ್ ಗೆ ಇಂದು ದಿನಾಂಕ 07-08-2021 ರಂದು ಸಚಿವರಾದ ವಿ. ಸುನೀಲ್ ಕುಮಾರ್ ಅವರೊಂದಿಗೆ ಶಾಸಕ ಶ್ರೀ ಕೆ ರಘುಪತಿ ಭಟ್ ಅವರು ಭೇಟಿ ನೀಡಿ ಇಲ್ಲಿನ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಹಾಗೂ ಜಿಲ್ಲಾಧಿಕಾರಿಗಳಾದ ಜಿ ಜಗದೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ನವೀನ್ ಭಟ್ ವೈ, ಅಪರ ಜಿಲ್ಲಾಧಿಕಾರಿಗಳಾದ ಸದಾಶಿವ ಪ್ರಭು, ಜಿಲ್ಲಾ ಆರೋಗ್ಯಾಧಿಕಾರಿಗಳಾದ ನಾಗಭೂಷಣ್ ಉಡುಪ, ಜಿಲ್ಲಾ ಶಸ್ತ್ರಚಿಕಿತ್ಸಕರಾದ ಮಧುಸೂದನ್ ನಾಯಕ್ ಹಾಗೂ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.