ರಾಜ್ಯ

ಸಿಲಿಂಡರ್ ಸ್ಫೋಟ: ಏಳು ಕಾರ್ಮಿಕರಿಗೆ ಸುಟ್ಟ ಗಂಭೀರ ಗಾಯ

ಬೆಂಗಳೂರು: ನಗರದಲ್ಲಿ ಮತ್ತೊಂದು ಸಿಲಿಂಡರ್ ಸ್ಫೋಟ ಸಂಭವಿಸಿದೆ. ಜಿಗಣಿ ಪೊಲೀಸ್ ಠಾಣೆಯ ಹಿಂಭಾಗದಲ್ಲಿರುವ ಕಟ್ಟಡದಲ್ಲಿ ಸಿಲಿಂಡರ್ ಸ್ಫೋಟ ಸಂಭವಸಿದೆ.

ಸ್ಫೋಟದ ತೀವ್ರತೆಯಿಂದಾಗಿ ಮನೆ ಬೆಂಕಿಗೆ ಆಹುತಿಯಾಗಿದೆ. ಮಂಜುನಾಥ್ ರೆಡ್ಡಿ ಎಂಬವರ ಮನೆಯಲ್ಲಿ ಈ ದುರಂತ ನಡೆದಿದೆ.

ಈ ಮನೆಯಲ್ಲಿ ಉತ್ತರ ಭಾರತದ ಕಾರ್ಮಿಕರು ವಾಸವಾಗಿದ್ದರು. ಸಿಲಿಂಡರ್ ಸ್ಫೋಟದಿಂದ ಏಳು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ

Related Articles

Leave a Reply

Your email address will not be published. Required fields are marked *

Back to top button
error: Content is protected !!