ಹಡಿಲು ಭೂಮಿ ಕೃಷಿ ಆಂದೋಲನ”ದಡಿ ಕೃಷಿ ನಾಟಿ ಮಾಡಿದ ಗದ್ದೆಯಲ್ಲಿ ಸ್ಕೌಟ್ಸ್ ಅಂಡ್ ಗೈಡ್ಸ್ ವಿದ್ಯಾರ್ಥಿಗಳಿಂದ ಕಳೆ ಕೀಳುವ ಕಾರ್ಯ.

“ಹಡಿಲು ಭೂಮಿ ಕೃಷಿ ಆಂದೋಲನ”ದಡಿ ಕೇದಾರೋತ್ಥಾನ ಟ್ರಸ್ಟ್ ಮೂಲಕ ಅಂಬಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಂಕೇರಕಟ್ಟ ಭಾಗದಲ್ಲಿ ಕೃಷಿ ನಾಟಿ ಮಾಡಿದ ಗದ್ದೆಯಲ್ಲಿ ಬೆಳೆದಿರುವ ಕಳೆಗಳನ್ನು ಇಂದು ದಿನಾಂಕ 07-08-2021 ರಂದು ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಸೇರಿ ತೆಗೆಯುತ್ತಿದ್ದು, ಸಚಿವರಾದ ವಿ ಸುನೀಲ್ ಕುಮಾರ್ ಅವರೊಂದಿಗೆ ಶಾಸಕ ಶ್ರೀ ಕೆ. ರಘುಪತಿ ಭಟ್ ರವರು ಸ್ಥಳಕ್ಕೆ ಭೇಟಿ ನೀಡಿ ವೀಕ್ಷಿಸಿದರು.
ವಿದ್ಯಾರ್ಥಿಗಳೊಂದಿಗೆ ಸ್ಕೌಟ್ಸ್ ಮಾಸ್ಟರ್ ಹಾಗೂ ಗೈಡ್ಸ್ ಕ್ಯಾಪ್ಟನ್ ರವರು ಕಳೆ ತೆಗೆಯುವ ಕಾರ್ಯದಲ್ಲಿ ತೊಡಗಿದ್ದು, ಸೇವಾ ಮನೋಭಾವದಿಂದ ಈ ಕಾರ್ಯದಲ್ಲಿ ಪಾಲ್ಗೊಂಡಿರುವ ಎಲ್ಲರಿಗೂ ಶಾಸಕ ಶ್ರೀ ಕೆ. ರಘುಪತಿ ಭಟ್ ಅವರು ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ಜಿಲ್ಲಾ ಬಿಜೆಪಿ ಸಹ ವಕ್ತಾರರಾದ ಶಿವಕುಮಾರ್, ಅಂಬಲಪಾಡಿ ಗ್ರಾಮ ಪಂಚಾಯತ್ ಸದಸ್ಯರು, ಕೇದಾರೋತ್ಥಾನ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿಗಳಾದ ಮುರಳಿ ಕಡೆಕಾರ್, ಕೋಶಾಧಿಕಾರಿಗಳಾದ ರಾಘವೇಂದ್ರ ಕಿಣಿ, ಸದಸ್ಯರಾದ ದಿನಕರ್ ಬಾಬು ಹಾಗೂ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ನ ಜಿಲ್ಲಾ ಸಂಘಟಕರಾದ ಸುಮನಾ ಶೇಖರ್, ನಿತಿನ್ ಅಮೀನ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.