
ಉಡುಪಿ ವಿಧಾನಸಭಾ ಕ್ಷೇತ್ರದಾದ್ಯಂತ ಹಮ್ಮಿಕೊಂಡಿರುವ ಹಡಿಲು ಭೂಮಿ ಕೃಷಿ ಅಂದೋಲನ”ದಡಿ ಕೇದಾರೋತ್ಥಾನ ಟ್ರಸ್ಟ್ ಮೂಲಕ ಹಡಿಲು ಭೂಮಿ ಕೃಷಿ ಮಾಡಲಾಗಿದ್ದು, ನಾಟಿ ಮಾಡಿದ ಗದ್ದೆಗಳಲ್ಲಿ ಪೈರಿನ ನಡುವೆ ಬೆಳೆದ ಕಳೆಗಳನ್ನು ತೆಗೆಯುವ ಅಭಿಯಾನ ಇಂದು ದಿನಾಂಕ 08-08-2021 ರಂದು ಉಪ್ಪೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆಯುತ್ತಿದ್ದು, ಶಾಸಕ ಶ್ರೀ ಕೆ. ರಘುಪತಿ ಭಟ್ ಸ್ಥಳಕ್ಕೆ ಭೇಟಿ ನೀಡಿ ವೀಕ್ಷಿಸಿದರು.
ಸೇವಾ ಮನೋಭಾವದಿಂದ ಈ ಕಾರ್ಯದಲ್ಲಿ ಪಾಲ್ಗೊಂಡಿರುವ ಸರ್ವರಿಗೂ ಶಾಸಕ ಶ್ರೀ ಕೆ. ರಘುಪತಿ ಭಟ್ ಅವರು ಕೃತಜ್ಞತೆಗಳನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಉಪ್ಪೂರು ಗ್ರಾಮ ಪಂಚಾಯತ್ ಸದಸ್ಯರುಗಳಾದ ಅಶ್ವಿನ್, ಸತೀಶ್ ಪೂಜಾರಿ, ರಾಜಶ್ರೀ, ಕೇದಾರೋತ್ಥಾನ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿಗಳಾದ ಮುರಳಿ ಕಡೆಕಾರ್, ಕೋಶಾಧಿಕಾರಿಗಳಾದ ರಾಘವೇಂದ್ರ ಕಿಣಿ, ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಶಿವಮೊಗ್ಗ ಮತ್ತು ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಬ್ರಹ್ಮಾವರದ ಹಿರಿಯ ಕ್ಷೇತ್ರ ಅಧಿಕಾರಿಗಳಾದ ಡಾll. ಶಂಕರ್, ಪಕ್ಷದ ಕಾರ್ಯಕರ್ತರು, ಸ್ಥಳೀಯ ಕೃಷಿಕರು ಉಪಸ್ಥಿತರಿದ್ದರು.