
ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶ್ರೀ ವಿ. ಸುನಿಲ್ ಕುಮಾರ್ ಅವರೊಂದಿಗೆ ಶಾಸಕ ಶ್ರೀ ಕೆ. ರಘುಪತಿ ಭಟ್ ರವರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯರು ಹಾಗೂ ಉಡುಪಿ ನಗರಸಭೆಯ ಮಾಜಿ ಅಧ್ಯಕ್ಷರಾದ ಎಂ. ಸೋಮಶೇಖರ್ ಭಟ್ ಅವರ ಮನೆಗೆ ಇಂದು ದಿನಾಂಕ 09-08-2021 ರಂದು ಭೇಟಿ ನೀಡಿ ಅವರ ಕ್ಷೇಮಾರೋಗ್ಯವನ್ನು ವಿಚಾರಿಸಿದರು.
ಈ ಸಂದರ್ಭದಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಘವೇಂದ್ರ ಕಿಣಿ, ನಗರಸಭಾ ಸದಸ್ಯರಾದ ರಶ್ಮಿ ಚಿತ್ತರಂಜನ್ ಭಟ್, ಬಾಲಕೃಷ್ಣ ಶೆಟ್ಟಿ, ಕರಂಬಳ್ಳಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಕಿಶೋರ್ ಕರಂಬಳ್ಳಿ ಹಾಗೂ ಸೋಮಶೇಖರ್ ಭಟ್ ಅವರ ಕುಟುಂಬದವರು ಉಪಸ್ಥಿತರಿದ್ದರು.