
ಮಂಗಳೂರು : ಬೈಕ್ ಸವಾರನೋರ್ವ ಭೀಕರ ರಸ್ತೆ ಅಪಘಾತವೊಂದರಲ್ಲಿ ದಾರುಣವಾಗಿ ಮೃತಪಟ್ಟ ಘಟನೆ ಬಿಕರ್ನಕಟ್ಟೆ ಸಮೀಪ ನಡೆದಿದೆ. ಉಳಾಯಿಬೆಟ್ಟು ನಿವಾಸಿ ದಯಾನಂದ ಮೃತಪಟ್ಟ ಯುವಕ.
ಲಾರಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಬೈಕ್ ಸವಾರ ಲಾರಿಯಡಿಗೆ ಬಿದ್ದಿದ್ದಾರೆ. ಈ ಕಾರಣದಿಂದಾಗಿ ಬೈಕ್ ಸವಾರನ ದೇಹ ಛಿದ್ರವಾಗಿದೆ. ಸ್ಥಳಕ್ಕೆ ಕದ್ರಿ ಠಾಣಾ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆಂದು ಮಾಹಿತಿ ತಿಳಿದುಬಂದಿದೆ.