ಕರಾವಳಿ
ಉಡುಪಿ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಸಮಸ್ಯೆಗಳ ಕುರಿತು ಸಚಿವರೊಂದಿಗೆ ಬೆಂಗಳೂರಿನಲ್ಲಿ ಸಭೆ-ಶಾಸಕ ರಘುಪತಿ ಭಟ್ ಭಾಗಿ.!

ಉಡುಪಿಯ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಸಮಸ್ಯೆಗಳ ಕುರಿತು ಇಂದು ದಿನಾಂಕ 11-08-2021 ರಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಡಾll ಸುಧಾಕರ್ ಅವರ ನೇತೃತ್ವದಲ್ಲಿ ಅಧಿಕಾರಿಗಳೊಂದಿಗೆ ಬೆಂಗಳೂರಿನಲ್ಲಿ ಸಭೆ ನಡೆಸಿ ಮುಂದಿನ ಕಾರ್ಯ ಯೋಜನೆಗಳ ಬಗ್ಗೆ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಕ್ತರ್, ಆಯುಕ್ತರಾದ ಕೆ. ವಿ. ತ್ರಿಲೋಕ್ ಚಂದ್ರ, ಉಡುಪಿ ಜಿಲ್ಲಾ ಆರೋಗ್ಯಾಧಿಕಾರಿಗಳಾದ ನಾಗಭೂಷಣ್ ಉಡುಪ, ಜಿಲ್ಲಾ ಶಸ್ತ್ರಚಿಕಿತ್ಸಕರಾದ ಮಧುಸೂದನ್ ನಾಯಕ್ ಉಪಸ್ಥಿತರಿದ್ದರು.