
ಚೆನ್ನೈ : ನಾವು ಬಿಜೆಪಿಯೊಂದಿಗೆ ಮೈತ್ರಿ ಮುಂದುವರೆಸುತ್ತೇನೆ ಎಂದು ತಮಿಳುನಾಡಿನ ಉಪಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಹೇಳಿದರು. ಚೆನ್ನೈನಲ್ಲಿ ನಡೆದ ಎರಡನೇ ಹಂತದ ಮೆಟ್ರೋ ಯೋಜನೆಗೆ ಅವರು ಚಾಲನೆ ನೀಡಿ ಮಾತನಾಡಿದರು.
ನಂತರ ಗೃಹ ಸಚಿವ ಅಮಿತ್ ಶಾ ಮಾತನಾಡಿ ದೇಶದ ಎರಡು ರಾಜ್ಯಗಳಲ್ಲಿ ಮಾತ್ರ ರಕ್ಷಣಾ ಕೈಗಾರಿಕಾ ಕಾರಿಡಾರ್ ಯೋಜನೆ ಸ್ಥಾಪಿಸುವುದಾಗಿ ಮೋದಿ ಸರ್ಕಾರ ಘೋಷಣೆ ಮಾಡಿದೆ. ತಮಿಳುನಾಡು ಅದರ ಭಾಗವಾಗಿದೆ ಎಂದು ಹೇಳಿದರು. ಪ್ರಧಾನಿ ಮೋದಿ ಅವರು ಅಧಿಕಾರಕ್ಕೆ ಬಂದ ನಂತರ ರಾಜ್ಯಗಳಲ್ಲಿ ಸ್ಪೆರ್ಧಾತ್ಮಕತೆ ಹೆಚ್ಚಾಗಿದೆ, ಈ ವರ್ಷ ಉತ್ತಮ ಆಡಳಿತ ರಾಜ್ಯಗಳಲ್ಲಿ ತಮಿಳುನಾಡು ಮೊದಲ ಸ್ಥಾನ ಪಡೆದಿರುವುದಕ್ಕೆ ನನಗೆ ಸಂತಸವಾಗಿದೆ ಎಂದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ತಮಿಳುನಾಡಿಗೆ ಬಂದಿಳಿದಿದ್ದಾರೆ.. ಶಾ ಇಂದು ಎರಡು ದಿನಗಳ ಕಾಲ ಇಲ್ಲಿ ವಾಸ್ತವ್ಯ ಹೂಡಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.