
ಬೆಂಗಳೂರು : ಜಿ.ಪಂ. ಸದಸ್ಯ ಯೋಗೇಶ್ ಗೌಡ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಕಾಂಗ್ರೆಸ್ ನಾಯಕ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
2016ರ ಜೂನ್ 15ರಂದು ನಡೆದಿದ್ದ ಧಾರವಾಡ ಜಿ.ಪಂ. ಸದಸ್ಯ ಯೋಗೇಶ್ ಗೌಡ ಅವರ ಕೊಲೆ ಪ್ರಕರಣದ ವಿಚಾರಣೆ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿ ಅವರನ್ನು ವಶಕ್ಕೆ ಪಡೆಯಾಗಿದೆ ಎಂದು ತಿಳಿದು ಬಂದಿದೆ.
ಧಾರವಾಡದ ಬಾರಾಕೊಟ್ರಿ ಪ್ರದೇಶದಲ್ಲಿನ ಮನೆಯಿಂದ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದು ಉಪನಗರ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.
2016ರಲ್ಲಿ ಯೋಗೇಶ್ ಗೌಡ ಕೊಲೆ ನಡೆದಿತ್ತು. ಆಗ ವಿನಯ್ ಕುಲಕರ್ಣಿ ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕರಾಗಿದ್ದರು.