
ಮಂಗಳೂರು: ಕರಾವಳಿಯಲ್ಲಿ ಜೂ.11, 12 ಹಾಗೂ 13ರಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
ಜೂ.10ರಂದು ಕರಾವಳಿಯ ಅಲ್ಲಲ್ಲಿ ಮಳೆಯಾಗಲಿದ್ದು, ಕರಾವಳಿಯಲ್ಲಿ ಅಲರ್ಟ್ ಘೋಷಣೆ ಮಾಡಲಾಗಿದೆ. ಇದರ ಜತೆಯಲ್ಲಿ ಜೂ.11ರ ಬಳಿಕ ಮುಂಗಾರು ಮತ್ತಷ್ಟು ಚುರುಕಾಗಲಿದ್ದು, ಭಾರಿ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಜೂ.1ರಂದೇ ಮುಂಗಾರು ಕೇರಳ ಪ್ರವೇಶಿಸಿದ್ದು ನಿಸರ್ಗ ಚಂಡಮಾರುತದಿಂದಾಗಿ ರಾಜ್ಯಕ್ಕೆ ಕೊಂಚ ತಡವಾಗಿ ಪ್ರವೇಶವಾಗಿದೆ.