ಕರಾವಳಿತಾಜಾ ಸುದ್ದಿಗಳು
ಉಡುಪಿ: ಇಂದಿನ ಕೊರೊನಾ ಪ್ರಕರಣ ಸ್ಥಿತಿಗತಿ..!

ಉಡುಪಿ: ಉಡುಪಿ ಜಿಲ್ಲೆಯಲ್ಲಿ ೧೧೫ ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-೫೮, ಕುಂದಾಪುರ-೧೬, ಕಾರ್ಕಳ-೩೯, ಹೊರ ಜಿಲ್ಲೆಯ ಇಬ್ಬರು ಸೋಂಕಿಗೆ ಒಳಗಾಗಿದ್ದಾರೆ. ೯೯ ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ ೬೯೭೬೬ ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ೧೨೭೪ ಸಕ್ರಿಯ ಪ್ರಕರಣಗಳಿವೆ.
ಓರ್ವರು ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ೪೩೨ ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಆಗಸ್ಟ್ ೧೨ ರಂದು ೬೯೦೯ ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು ೮೪೨೪೬೦ ಮಂದಿಯನ್ನು ಪರೀಕ್ಷಿಸಲಾಗಿದೆ.