
ವಿವಿಧ ಕಾರ್ಯಕ್ರಮ ನಿಮಿತ್ತ ದಿನಾಂಕ 12-08-2021 ರಂದು ಉಡುಪಿಗೆ ಆಗಮಿಸಿದ ಮುಖ್ಯಮಂತ್ರಿಗಳಾದ ಸನ್ಮಾನ್ಯ ಬಸವರಾಜ್ ಬೊಮ್ಮಾಯಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಡಾll ಕೆ ಸುಧಾಕರ್ ಅವರೊಂದಿಗೆ ಶಾಸಕ ಶ್ರೀ ಕೆ ರಘುಪತಿ ಭಟ್ ಅವರು ಜಿಲ್ಲಾ ಬಿಜೆಪಿ ಕಚೇರಿಗೆ ಭೇಟಿ ನೀಡಿದರು.
ಜಿಲ್ಲಾ ಬಿಜೆಪಿ ವತಿಯಿಂದ ಮುಖ್ಯಮಂತ್ರಿಗಳಾದ ಸನ್ಮಾನ್ಯ ಬಸವರಾಜ್ ಬೊಮ್ಮಾಯಿ ಅವರನ್ನು ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಡಾll.ಕೆ ಸುಧಾಕರ್ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಉಪಾಧ್ಯಕ್ಷರಾದ ಯಶ್ ಪಾಲ್ ಸುವರ್ಣ, ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಸದಾನಂದ ಉಪ್ಪಿನಕುದ್ರು ಹಾಗೂ ಪಕ್ಷದ ಪ್ರಮುಖರು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.