
ಬೆಂಗಳೂರು: ನಕಲಿ ಮಾರ್ಕ್ಸ್ ಕಾರ್ಡ್ ದಂಧೆ ನಡೆಸುತ್ತಿದ್ದ ದಂಪತಿಗಳಿಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಆರೋಪಿಗಳು ಪಂಜಾಬ್ ಮೂಲದವರಾಗಿದ್ದು, ಹಲವು ವರ್ಷಗಳಿಂದ ಬೆಂಗಳೂರಿನಲ್ಲಿಯೇ ವಾಸವಾಗಿದ್ದರು.
ಹಲವು ಪದವಿಗಳ ನಕಲಿ ಮಾರ್ಕ್ಸ್ ಕಾರ್ಡ್ ಗಳನ್ನು ನೀಡುತ್ತಿದ್ದರಲ್ಲದೇ ಒಂದು ಪದವಿ ಮಾರ್ಕ್ಸ್ ಕಾರ್ಡ್ ಗೆ 60 ರಿಂದ 70 ಸಾವಿರ ರೂಪಾಯಿ ಪಡೆಯುತ್ತಿದ್ದರು.
ರವೀಂದ್ರನಾಥ್ ಟ್ಯಾಗೋರ್ ವಿಶ್ವವಿದ್ಯಾಲಯ, ಅಸೆಟ್ ವಿವಿ, ಸಿ.ವಿ. ರಾಮನ್ ವಿವಿಗಳಿಗೆ ಸೇರಿದ ಮಾರ್ಕ್ಸ್ ಕಾರ್ಡ್ ಗಳನ್ನು ಮಾರಾಟ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ದಂಪತಿಯನ್ನು ಬಂಧಿಸಿದ್ದಾರೆ.