ರಾಜ್ಯ
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ… ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವು…!

ಬಂಟ್ವಾಳ : ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ಆಕ್ಟೀವಾದ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮವಾಗಿ ಆಕ್ಟೀವಾದ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಡೋಳಿಯ ಬೊಳ್ಳುಕಲ್ಲು ಸಮೀಪದಲ್ಲಿ ಸಂಭವಿಸಿದೆ. ಮೃತ ಯುವಕ ಕನ್ಯಾನ ಪರಕಜೆ ನಿವಾಸಿ ಮಂಜು ಬೆಳ್ಚಾಡ ರವರ ಪುತ್ರ ಗಣೇಶ್ ಬಂಗೇರ (೫೪) ಎಂದು ತಿಳಿದುಬಂದಿದೆ.
ಉಪ್ಪಿನಂಗಡಿ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಲಾರಿ ಮಾಣಿಯಿಂದ ಬುಡೋಳಿಗೆ ಸಾಗುತ್ತಿದ್ದ ಆಕ್ಟೀವಾಕ್ಕೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಸವಾರನ ತಲೆ ಛಿದ್ರಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆಂದು ಮಾಹಿತಿ ದೊರಕಿದೆ.