
ಉಡುಪಿ: ಉಡುಪಿ ಜಿಲ್ಲೆಯಲ್ಲಿ ೧೬೯ ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-೯೮, ಕುಂದಾಪುರ-೨೫, ಕಾರ್ಕಳ-೪೩, ಹೊರ ಜಿಲ್ಲೆಯ ಮೂವರು ಸೋಂಕಿಗೆ ಒಳಗಾಗಿದ್ದಾರೆ. ೧೪೬ ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ ೬೯೯೧೨ ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ೧೨೯೬ ಸಕ್ರಿಯ ಪ್ರಕರಣಗಳಿವೆ.
ಓರ್ವರು ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ೪೩೩ ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಆಗಸ್ಟ್ ೧೩ ರಂದು ೫೮೪೮ ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು ೮೪೮೪೦೮ ಮಂದಿಯನ್ನು ಪರೀಕ್ಷಿಸಲಾಗಿದೆ.