
ಬೆಂಗಳೂರು: ಮಾಜಿ ಸಚಿವ ,ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ನಿವಾಸದ ಮೇಲೆ ಐಟಿ ಅಧಿಕಾರಿಗಳು ಬೆಳ್ಳಂಬೆಳಗೆ ದಾಳಿ ನಡೆಸಿದ್ದಾರೆ.
ಮುಂಜಾನೆ ಆರು ಗಂಟೆಗೆ ಅಧಿಕಾರಿಗಳು ಜಮೀರ್ ಅಹ್ಮದ್ ಅವರ ಮನೆ, ಹಾಗೂ ಅವರಿಗೆ ಸಂಬಂಧಿಸಿದ ಪ್ಲ್ಯಾಟ್ ಗಳ ಮೇಲೆ ದಾಳಿ ನಡೆಸಿದ್ದಾರೆ.
ಜಮೀರ್ ಅವರ ಬೆಂಗಳೂರಿನಲ್ಲಿ ಇರುವ ಕಟೋಂನ್ಮೆಂಟ್ ರೈಲ್ವೇ ನಿಲ್ದಾಣದ ಬಳಿಯ ನೂತನ ಮನೆ , ಕಲಾಸಿಪಾಳ್ಯದಲ್ಲಿರುವ ನಿವಾಸದ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಐಟಿ ಅಧಿಕಾರಿಗಳು ದಾಳಿ ನಡೆಸುವ ವೇಳೆ ಜಮೀರ್ ಅಹ್ಮದ್ ಮನೆಯಲ್ಲಿದ್ದರು . ಏಕಕಾಲದಲ್ಲಿ 50 ಅಧಿಕಾರಿಗಳ ತಂಡ ದಾಳಿ ನಡೆಸಿದ್ದು ಶೋಧ ಕಾರ್ಯ ನಡೆಸುತ್ತಿದೆ.