
ತುಮಕೂರು: ಧ್ವಜಸ್ತಂಭ ನಿಲ್ಲಿಸುವಾಗ ಶಾರ್ಟ್ ಸರ್ಕ್ಯೂಟ್ ಆಗಿ ಓರ್ವ ಬಾಲಕ ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಭಾನುವಾರ ಬೆಳಗ್ಗೆ ತುಮಕೂರು ತಾಲೂಕಿನ ಕರಿಕೆರೆ ಗ್ರಾಮದಲ್ಲಿ ಇಂದು ನಡೆದಿದೆ.
ಧ್ವಜಸ್ತಂಭ ನಿಲ್ಲಿಸುವಾಗ ವಿದ್ಯುತ್ ತಂತಿ ತಗುಲಿ ೧೬ ವರ್ಷದ ಬಾಲಕ ಸಾವನ್ನಪ್ಪಿದ್ದಾನೆ. ಪವನ್ ಮತ್ತು ಚಂದನ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.