
75 ನೇ ಸ್ವಾತಂತ್ರ್ಯೋತ್ಸವದ ನೆನಪಿಗಾಗಿ ಗುರುಗಳಾದ ಶ್ರೀ ರಾಮಕೃಷ್ಣ ಕೊಡಂಚ, ಯೋಗ ಗುರು ಶ್ರೀ ನರೇಂದ್ರ ಕಾಮತ್, ಹಾಗೂ ಡಾll ಶೋಭಿತ್ ಶೆಟ್ಟಿ ಪರೀಕ ಇವರ ಮಾರ್ಗದರ್ಶನದಲ್ಲಿ ಇಂದು ದಿನಾಂಕ 15-08-2021 ರಂದು ಶ್ರೀಕೃಷ್ಣ ಮಠದ ನರಹರಿತೀರ್ಥ ವೇದಿಕೆ ರಾಜಾಂಗಣದಲ್ಲಿ ಆಯೋಜಿಸಲಾದ ಯೋಗಾಸನದಲ್ಲಿ 6 ವಿಶ್ವ ದಾಖಲೆಗಳ ಸರದಾರಿಣಿ, ನಾಟ್ಯಮಯೂರಿ ಬಿರುದಾಂಕಿತ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯೋಗರತ್ನ “ತನುಶ್ರೀ ಪಿತ್ರೋಡಿ” ಇವರು 43 ನಿಮಿಷದಲ್ಲಿ 245 ಯೋಗಾಸನದ ಆಸನಗಳನ್ನು ಹಾಕುವ ಮೂಲಕ “ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್” 7ನೇ ವಿಶ್ವದಾಖಲೆ ಮಾಡಿದ್ದಾರೆ.
ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಸಕ ಶ್ರೀ ಕೆ. ರಘುಪತಿ ಭಟ್ ಅವರು ತನುಶ್ರೀ ಪಿತ್ರೋಡಿ ಅವರಿಗೆ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಪರ್ಯಾಯ ಶ್ರೀ ಪಲಿಮಾರು ಮಠದ ಶ್ರೀ ಶ್ರೀ ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿಯವರು ಆಶೀರ್ವಚಿಸಿದರು. ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಲಾಲಾಜಿ ಆರ್ ಮೆಂಡನ್, ಉಡುಪಿ ನಗರ ಸಭೆಯ ಉಪಾಧ್ಯಕ್ಷರಾದ ಲಕ್ಷ್ಮೀ ಮಂಜುನಾಥ ಕೊಳ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಜಯಕರ್ ಶೆಟ್ಟಿ ಇಂದ್ರಾಳಿ, ನಗರಸಭಾ ಸದಸ್ಯರಾದ ರಶ್ಮಿ ಚಿತ್ತರಂಜನ್ ಭಟ್, ರಾಜ್ಯ ಕಾರ್ಯಕಾರಣಿ ಸದಸ್ಯರಾದ ಗೀತಾಂಜಲಿ ಸುವರ್ಣ ಹಾಗೂ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನ ತೀರ್ಪುಗಾರರಾದ ಮನೀಷ್ ಉಪಸ್ಥಿತರಿದ್ದರು.