ಕರಾವಳಿ

ಸಗ್ರಿನೋಳೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾರ್ಯಕ್ರಮದಲ್ಲಿ ಶಾಸಕ ರಘುಪತಿ ಭಟ್ ಭಾಗಿ

ಸಗ್ರಿನೋಳೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡವನ್ನು ಸುವರ್ಣ ಮಹೋತ್ಸವ ಸಮಿತಿ ಹಾಗೂ ಶಾಲಾಭಿವೃದ್ಧಿ ಸಮಿತಿ ಯಿಂದ ದುರಸ್ತಿ ದುರಸ್ತಿಗೊಳಿಸಲಾಗಿದ್ದು, ಇಂದು ದಿನಾಂಕ 15-08-2021 ರಂದು ನಡೆದ ಕಾರ್ಯಕ್ರಮದಲ್ಲಿ ಶಾಸಕ ಶ್ರೀ ಕೆ. ರಘುಪತಿ ಭಟ್ ರವರು ಭಾಗವಹಿಸಿ ಸಮಿತಿಯವರಿಗೆ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭ ನಿವೃತ್ತ ಮುಖ್ಯೋಪಾಧ್ಯಾಯರಾದ ವಿಮಲ ಅವರನ್ನು ಸನ್ಮಾನಿಸಲಾಯಿತು.

ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಘವೇಂದ್ರ ಕಿಣಿ, ಸ್ಥಳೀಯ ನಗರಸಭಾ ಸದಸ್ಯರಾದ ಭಾರತಿ ಪ್ರಶಾಂತ್, ಸುವರ್ಣ ಮಹೋತ್ಸವ ಸಮಿತಿ ಅಧ್ಯಕ್ಷರಾದ ಹರೀಶ್ ಭಾರದ್ವಾಜ್ ಹಾಗೂ ಅಧ್ಯಾಪಕರು, ಹಳೆ ವಿದ್ಯಾರ್ಥಿ ಯವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Back to top button
error: Content is protected !!

Adblock Detected

Please consider supporting us by disabling your ad blocker