
ತಾಲ್ಲೂಕಿನ ಹೊಸಂಗಡಿ ಗ್ರಾಮದ ಕಂಠಗದ್ದೆ ಎಂಬಲ್ಲಿನ ಕೃಷಿಕ ವಿಠಲ ಗೊಲ್ಲ ಬುಧವಾರ ಮಧ್ಯಾಹ್ನ ಮನೆ ಸಮೀಪ ಹರಿಯುವ ಹೊಳೆ ಬದಿಗೆ ಮೂತ್ರ ವಿಸರ್ಜನೆಗೆಂದು ಹೋಗಿದ್ದರು. ಈ ವೇಳೆ ಹೊಳೆ ದಂಡೆಯ ಸಮೀಪದಲ್ಲಿನ ಕಲ್ಲಿನ ಮೇಲೆ ಆಕಸ್ಮಿಕವಾಗಿ ಕಾಲು ಇಟ್ಟಾಗ ಮಣ್ಣು ಸಡಿಲಗೊಂಡು, ನಿಯಂತ್ರಣ ತಪ್ಪಿ ರಭಸವಾಗಿ ಹರಿಯುತ್ತಿದ್ದ ಹೊಳೆಗೆ ಬಿದ್ದ ಕಾರಣದಿಂದ ವಿಠಲ ಗೊಲ್ಲ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದರು.
ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದ ಅವರ ಪತ್ತೆಗಾಗಿ ಸಾಕಷ್ಟು ಹುಡುಕಾಟ ನಡೆಸಿದ್ದರು ಪತ್ತೆಯಾಗಿರಲಿಲ್ಲ. ಗುರುವಾರ ಮನೆಯಿಂದ 3 ಕಿ. ಮೀ ದೂರದಲ್ಲಿನ ಶಂಕರನಾರಾಯಣ ಪೋಲೀಸ ಠಾಣಾ ವ್ಯಾಪ್ತಿಯ ಕೆರೆಕಟ್ಟೆ ಬಳಿಯಲ್ಲಿ ಅವರ ಶವ ಪತ್ತೆಯಾಗಿದೆ.ಮೃತರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ. ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.