
ರಾಷ್ಟ್ರೀಯ ಹೆದ್ದಾರಿ ೧೬೯ ಎ ರ ತೀರ್ಥಹಳ್ಳಿ- ಉಡುಪಿ-ಮಂಗಳೂರು ರಸ್ತೆಯ ಆಗುಂಬೆ ಘಾಟಿಯಲ್ಲಿ ಸದ್ಯ ಮಳೆಗಾಲ ಮಳೆ ಕಡಿಮೆ ಇರುವುದರಿಂದ ಮಳೆ ಹೆಚ್ಚಾಗುವವರೆಗೆ ಭಾರಿ ವಾಹನ ಸಂಚಾರವನ್ನು ನಿಷೇಧಿಸಿ, ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಅವಕಾಶ ಕಲ್ಪಿಸಿ ಹೊರಡಿಸಿರುವ ಆದೇಶವನ್ನು ತಾತ್ಕಾಲಿಕವಾಗಿ ತಡೆಹಿಡಿದು ಭಾರಿ ವಾಹನಗಳ ಸಂಚಾರಕ್ಕೆ ಅನುಮತಿ ನೀಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ. ಜಗದೀಶ್ ಆದೇಶಿಸಿರುತ್ತಾರೆ.