
ಅಲೆವೂರು: ಇಲ್ಲಿನ ಪಡುಅಲೆವೂರು ದುರ್ಗಾನಗರ ಎಂಬಲ್ಲಿ ಭಾನುವಾರ ಎರಡು ಬೈಕ್ ಗಳ ಮಧ್ಯೆ ನಡೆದ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ತಡರಾತ್ರಿ ಕೊನೆಯುಸಿರೆಳೆದಿದ್ದಾನೆ.
ಮೃತನನ್ನು ಅಲೆವೂರು ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿಯ ನಿವಾಸಿ ನಿತಿನ್ ಕುಂದರ್ (೨೪) ಎಂದು ಗುರುತಿಸಲಾಗಿದೆ. ಈತ ಎಲೆಕ್ಟ್ರಿಷನ್, ಡ್ರೈವಿಂಗ್ ವೃತ್ತಿ ಮಾಡುತ್ತಿದ್ದನು ಎನ್ನಲಾಗಿದೆ.
ಭಾನುವಾರ ಬೈಕ್ ನಲ್ಲಿ ಮನೆಗೆ ಬರುತ್ತಿದ್ದ ವೇಳೆ ಎದುರಿನಿಂದ ಬರುತ್ತಿದ್ದ ಇನ್ನೊಂದು ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಇದರಿಂದ ನಿತಿನ್ ತಲೆಗೆ ಗಂಭೀರ ಗಾಯವಾಗಿದೆ. ಕೂಡಲೇ ಆತನನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.