ಕರಾವಳಿ
ಉಡುಪಿ: ಇಂದಿನ ಕೊರೊನಾ ಪ್ರಕರಣ ಸ್ಥಿತಿಗತಿ..!

ಉಡುಪಿ: ಉಡುಪಿ ಜಿಲ್ಲೆಯಲ್ಲಿ ೯೭ ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-೫೨, ಕುಂದಾಪುರ-೧೮, ಕಾರ್ಕಳ-೨೬, ಹೊರ ಜಿಲ್ಲೆಯ ಓರ್ವರು ಸೋಂಕಿಗೆ ಒಳಗಾಗಿದ್ದಾರೆ. ೧೩೧ ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ ೭೦೪೧೫ ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ೧೨೯೩ ಸಕ್ರಿಯ ಪ್ರಕರಣಗಳಿವೆ.
ಇಬ್ಬರು ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ೪೩೬ ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಆಗಸ್ಟ್ ೧೭ ರಂದು ೫೮೬೬ ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು ೮೬೪೬೪೪ ಮಂದಿಯನ್ನು ಪರೀಕ್ಷಿಸಲಾಗಿದೆ.