ಉಡುಪಿ: ನಾಳೆ ಬೆಳಿಗ್ಗೆ ಉಡುಪಿಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಸಭೆ ಕರೆದು ಲಾಕ್ ಡೌನ್ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಉಡುಪಿ ಡಿ.ಸಿ.ಜಿ.ಜಗಧೀಶ್ ಹೇಳಿದ್ದಾರೆ.ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಡಿಸಿ,ಜನಪ್ರತಿನಿಧಿಗಳ ಅಭಿಪ್ರಾಯ ಪಡೆದು ಅಂತಿಮ ನಿರ್ಣಯಕ್ಕೆ ಬರಲಿದ್ದೇವೆ. ಮುಖ್ಯಮಂತ್ರಿಗಳು ಬೆಂಗಳೂರು ಹೊರತುಪಡಿಸಿ ಬೇರೆ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಿದ್ದಾರೆ. ಆಯಾ ಜಿಲ್ಲೆಗಳ ಜಿಲ್ಲಾಡಳಿತವೇ ಲಾಕ್ಡೌನ್ ಬಗ್ಗೆ ನಿರ್ಣಯ ಕೈಗೊಳ್ಳಲಿವೆ .ನಾಳೆ ಲಾಕ್ಡೌನ್ ಸಾಧಕ ಬಾಧಕದ ಬಗ್ಗೆ ಚರ್ಚೆ ಮಾಡಲಿದ್ದೇವೆ.ಒಂದಷ್ಟು ಕಾಲಾವಕಾಶ ನೀಡಿ ಬಳಿಕ ಜಿಲ್ಲೆಯ ಗಡಿಗಳನ್ನು ಸೀಲ್ ಡೌನ್ ಮಾಡುವ ಬಗ್ಗೆಯೂ ಅಭಿಪ್ರಾಯಗಳು ಬಂದಿವೆ.ನಾಳೆ ಹತ್ತು ಗಂಟೆಯ ಸಭೆಯಲ್ಲಿ ಈ ಎಲ್ಲದರ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದೇವೆ ಎಂದು ಮಾಹಿತಿ ನೀಡಿದಾರೆ.