ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ, ಹಡಿಲು ಭೂಮಿ ಕೃಷಿ ಮಾಡಿದ ಗದ್ದೆಗಳಲ್ಲಿ ಕಳೆ ಕೀಳುವ ಕಾರ್ಯದಲ್ಲಿ ಭಾಗಿ..!

ಹಡಿಲು ಭೂಮಿ ಕೃಷಿ ಅಂದೋಲನ”ದಡಿ ಕೇದಾರೋತ್ಥಾನ ಟ್ರಸ್ಟ್ ಮೂಲಕ ಉಡುಪಿ ಕ್ಷೇತ್ರದಾದ್ಯಂತ 1500 ಎಕ್ರೆ ಹಡಿಲು ಭೂಮಿ ಕೃಷಿ ಮಾಡಲಾಗಿದ್ದು, ಅದರಲ್ಲಿ ಕಡೆಕಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 140 ಎಕರೆ ಹಡಿಲು ಭೂಮಿಯಲ್ಲಿ ನಾಟಿ ಮಾಡಲಾಗಿದೆ. ಈ ಗದ್ದೆಗಳಲ್ಲಿ ಪೈರಿನ ನಡುವೆ ಕಳೆ ಗಿಡಗಳು ಬೆಳೆದಿರುವುದರಿಂದ ಸ್ಥಳೀಯರು, ಜನಪ್ರತಿನಿಧಿಗಳು, ಶಾಲಾ ವಿದ್ಯಾರ್ಥಿಗಳು, ಸಂಘ-ಸಂಸ್ಥೆಯವರು ಸೇವಾ ಮನೋಭಾವನೆಯಿಂದ ಪಾಲ್ಗೊಂಡು ಕಳೆಗಳನ್ನು ತೆಗೆಯುವ ಕಾರ್ಯ ಮಾಡುತ್ತಿದ್ದಾರೆ.
ಇಂದು ದಿನಾಂಕ 19-08-2021 ರಂದು ಭುವನೆಂದ್ರ ಕಿದಿಯೂರ್ ಮನೆಯ ಹಿಂಬದಿ ಕಡೆಕಾರ್ ಬೈಲಿನಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಅವರೊಂದಿಗೆ ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರು ಗದ್ದೆಗಳಿದು ಪೈರಿನ ನಡುವೆ ಬೆಳೆದ ಕಳೆಗಳನ್ನು ತೆಗೆಯುವ ಕಾರ್ಯದಲ್ಲಿ ಭಾಗವಹಿಸಿದರು.
ಈ ಸಂದರ್ಭದಲ್ಲಿ ಬೆಳೆಯ ವಿವರಗಳನ್ನು ಮೊಬೈಲ್ ಮೂಲಕ ದಾಖಲಿಸುವ “ಬೆಳೆ ಸಮೀಕ್ಷೆ ಆಪ್” ಚಾಲನೆ ನೀಡಿ ಇದರ ಕೈಪಿಡಿಯನ್ನು ಬಿಡುಗಡೆ ಗೊಳಿಸಲಾಯಿತು
ವಿಧಾನ ಪರಿಷತ್ ಸದಸ್ಯರಾದ ತುಳಸಿ ಮುನಿರಾಜು, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಹಾಗೂ ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಕೆಂಪೇಗೌಡ, ಸಹಾಯಕ ನಿರ್ದೇಶಕರಾದ ಮೋಹನ್ ರಾಜ್, ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಶಿವಮೊಗ್ಗ ಮತ್ತು ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಬ್ರಹ್ಮಾವರದ ಮುಖ್ಯಸ್ಥರಾದ ಡಾll.ಬಿ ಧನಂಜಯ್, ಸಹ ಸಂಶೋಧನಾ ನಿರ್ದೇಶಕರಾದ ಡಾll. ಲಕ್ಷ್ಮಣ್, ಹಿರಿಯ ಕ್ಷೇತ್ರ ಅಧಿಕಾರಿಗಳಾದ ಶಂಕರ್, ಕೇದಾರೋತ್ಥಾನ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿಗಳಾದ ಮುರಳಿ ಕಡೆಕಾರ್, ಕೋಶಾಧಿಕಾರಿಗಳಾದ ರಾಘವೇಂದ್ರ ಕಿಣಿ, ಸದಸ್ಯರಾದ ದಿನಕರ್ ಬಾಬು ಹಾಗೂ ವಿವಿಧ ಸಂಘ ಸಂಸ್ಥೆಯವರು, ಕಾಲೇಜು ವಿದ್ಯಾರ್ಥಿ ವಿದ್ಯಾರ್ಥಿನಿಯರು, ಸ್ಥಳೀಯ ಕೃಷಿಕರು ಉಪಸ್ಥಿತರಿದ್ದರು.