
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವರಾದ ಶೋಭಾ ಅವರೊಂದಿಗೆ ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರು ಕೀರ್ತಿಶೇಷ ಡಾll ವಿ.ಎಸ್. ಆಚಾರ್ಯ ಅವರ ಮನೆಗೆ ಇಂದು ದಿನಾಂಕ 19-08-2021 ರಂದು ಭೇಟಿ ನೀಡಿ ಅವರ ಧರ್ಮಪತ್ನಿ ಶಾಂತಾ ವಿ. ಆಚಾರ್ಯ ಅವರ ಕ್ಷೇಮಾರೋಗ್ಯವನ್ನು ವಿಚಾರಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ತುಳಸಿ ಮುನಿರಾಜು, ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಉಪಾಧ್ಯಕ್ಷರಾದ ಶ್ರೀಶ ನಾಯಕ್, ರಾಜ್ಯ ಎಸ್.ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ್ ಬಾಬು, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾದ ವೀಣಾ ಶೆಟ್ಟಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.